ಜಿಲ್ಲೆ

ಹಾವೇರಿಯಲ್ಲಿ ಕನ್ನಡ ರಥಕ್ಕೆ ಅದ್ದೂರಿ ಸ್ವಾಗತ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಸಂಚರಿಸುತ್ತಿರುವ ಕನ್ನಡ ರಥ ಸೋಮವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಹುಕ್ಕೇರಿಮಠದ ಬಳಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಪೂಜೆ ಸಲ್ಲಿಸುವ ಮೂಲಕ ರಥವನ್ನು ಸ್ವಾಗತಿಸಿದರು.
ಕನ್ನಡ ರಥ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಶೀಲ್ದಾರ ಶಂಕರ ಜಿ., ಡಯಟ್ ಪ್ರಾಚಾರ್ಯ ಗಿರೀಶ ಪದಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ರಮೇಶ ಆನವಟ್ಟಿ, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.