ಜಿಲ್ಲೆ

ಅರೆಕಾಲಿಕ ಸ್ವಯಂಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಮನೋಭಾವನೆಯೊಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಬಯಸುವ ಹಾಲಿ-ನಿವೃತ್ತ ಶಿಕ್ಷಕರು ಸಮಾಜ ಸೇವೆಯಲ್ಲಿ ಆಸಕ್ತಿ ಹೊಂದಿದವರು, ಅಧ್ಯಾಪಕರು, ನಿವೃತ್ತ ನೌಕರರು, ರೈತರು, ಪಂಚಾಯಿತಿ ಸದಸ್ಯರು, ಯಾವುದೇ ಇಲಾಖೆಯ ನಿವೃತ್ತಿ ಹೊಂದಿದ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಮಹಿಳೆಯರು, ತೃತೀಯ ಲಿಂಗಿಗಳು, ಎಸ್.ಸಿ. ಎಸ್.ಟಿ ವರ್ಗದವರು, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದವರು, ಎಂ.ಎಸ್.ಡಬ್ಲೂೃ ವಿದ್ಯಾರ್ಥಿಗಳು, ಅಂಗನವಾಡಿ ಸಹಾಯಕರು, ವೈದ್ಯರು, ವಿದ್ಯಾರ್ಥಿಗಳು ಹಾಗೂ ಕಾನೂನು ವಿದ್ಯಾರ್ಥಿಗಳು, ರಾಜಕೀಯೇತರ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಸದಸ್ಯರು, ವಿಧವೆಯರು, ನಿವೃತ್ತ ಸೇನಾಧಿಕಾರಿಗಳು, ರಕ್ಷಣಾ ವಿಭಾಗದಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವವರ ಸಂಗಾತಿ, ಮಕ್ಕಳು, ಅರ್ಜಿ ಸಲ್ಲಿಸಬಹುದು.

ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ ರಚಿಸಿದ್ದು, ಅಗತ್ಯ ಬಂದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರೆಕಾಲಿಕ ಸ್ವಯಂಸೇವಕರ ಸೇವೆಗೆ ಯಾವುದೇ ವೇತನ ಅಥವಾ ಶುಲ್ಕ ಇರುವುದಿಲ್ಲ. ಆದರೆ ಕೆಲವೊಮ್ಮೆ ಗೌರವಧನಕ್ಕೆ ಅರ್ಹರಾಗಿರುತ್ತಾರೆ.

ಆಸಕ್ತ ತಮ್ಮ ಸಂಪೂರ್ಣ ಮಾಹಿತಿ ಹಾಗೂ ಸೂಕ್ತ ದಾಖಲೆಗಳು, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರದೊಂದಿಗೆ ಅಕ್ಟೋಬರ್ 4ರೊಳಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯಗಳ ಆವರಣ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾವೇರಿ ಈ ವಿಳಾಸದಲ್ಲಿ ಸಂಪರ್ಕಿಸಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೈಲಜಾ ಎಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.