ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಭೂಮಿಪುತ್ರ ರೈತ ಸಂಘ, ಅಲೆಮಾರಿ ಬುಡಕಟ್ಟು ಮಹಾಸಭಾ ಹಾಗೂ ಕರ್ನಾಟಕ ಮಾದಿಗರ ಸಂಘಗಳ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಬಂದ್ ಬೆಂಬಲಿಸಿ ತಹಶೀಲ್ದಾರ್ ಶಂಕರ ಜಿ.ಎಸ್. ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಭೂಮಿಪುತ್ರ ರೈತ ಸಂಘ ಅಧ್ಯಕ್ಷ ಫಕ್ಕೀರಗೌಡ ಗಾಜೀಗೌಡ್ರ, ಅಲೆಮಾರಿ ಸಂಘದ ಅಧ್ಯಕ್ಷ ವಿಭೂತಿ ಶೆಟ್ಟಿ, ದುರಗಪ್ಪ ಮಾದರ, ಇತರರಿದ್ದರು.