ಜಿಲ್ಲೆ

ಸಮೃದ್ಧಿ ಹಾಲು ಬಿಡುಗಡೆ ಅ.2ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಹಾವೆಮುಲ್) ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಪ್ರಯುಕ್ತ ಅ.2ರಂದು ಬೆಳಗ್ಗೆ 11 ಗಂಟೆಗೆ ಜಂಗಮನಕೊಪ್ಪದ ಯುಎಚ್‌ಟಿ ಹಾಲು ಪ್ಯಾಕಿಂಗ್ ಘಟಕದಲ್ಲಿ ಸಮೃದ್ಧಿ ಹಾಲು ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಹೋಟೆಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಶೆಟ್ಟಿ ಉದ್ಘಾಟಿಸಲಿದ್ದು, ಹಾವೆಮುಲ್ ಅಧ್ಯಕ್ಷ ಬಸವರಾಜ ಅರಬಗೊಂಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.