ಜಿಲ್ಲೆ

ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಅಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕಂದಾಯ ಇಲಾಖೆಯ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅರ್ಜಿಗಳನ್ನು ಅ.6ರ ಒಳಗಾಗಿ ಜಿಲ್ಲಾಧಿಕಾರಿಯವರ ಕಾರ್ಯಾಲಯಕ್ಕೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.