ಜಿಲ್ಲೆ

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ ಆ.9ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಆ.9ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾವೇರಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆಗಳು ಹಾಗೂ ನಿಗಧಿತ ನಮೂನೆಯಲ್ಲಿ ಸಾರ್ವಜನಿಕ ದೂರುಗಳ ಸ್ವೀಕಾರ ಕಾರ್ಯಕ್ರಮ ಜರುಗಲಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರ, ಡಿವೈಎಸ್‌ಪಿ ಚಂದ್ರಶೇಖರ ಬಿ.ಪಿ., ಪೊಲೀಸ್ ನಿರೀಕ್ಷಕರಾದ ಮಂಜುನಾಥ ನಡುವಿನಮನಿ, ಮುಸ್ತಾಕ್ ಅಹ್ಮದ ಹಾಗೂ ಎಚ್.ಆಂಜನೇಯ ಭಾಗವಹಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೆ, ಸಾರ್ವಜನಿಕ ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿದ್ದರೆ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರದ ಹಣ ದುರುಪಯೋಗ ಹಾಗೂ ಕೆಲಸ ಮಾಡಿಕೊಡಲು ಲಂಚ ಕೇಳುತ್ತಿರುವ ಪ್ರಕರಣಗಳಿದ್ದರೆ, ಸಾರ್ವಜನಿಕರು ಅನುಬಂಧ 1 ಮತ್ತು 2ರಲ್ಲಿ ದೂರು ನೀಡಬಹುದಾಗಿದೆ. ನ್ಯಾಯಾಲದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಕುರಿತಾದ ದೂರುಗಳನ್ನು ಸ್ವೀಕರಿಸಿವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.