ಜಿಲ್ಲೆ

ಲೋಕಾಯುಕ್ತ ಅಹವಾಲು ಸ್ವೀಕಾರ ಸಭೆ 24ರಂದು

ಹಾವೇರಿ: ಹಾವೇರಿ ಲೋಕಾಯುಕ್ತ ಅಧಿಕಾರಿಗಳಿಂದ ಮಾ.24ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸವಣೂರ ತಹಸೀಲ್ದಾರ ಕಾರ್ಯಾಲಯದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಜರುಗಲಿದೆ.

ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ, ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಬ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಗಳಿಕೆ, ಸರ್ಕಾರಿ ಹಣ ದುರುಪಯೋಗ, ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿ, ನೌಕರರಿಂದ ಲಂಚ ಕೇಳುವ ದೂರುಗಳಿದ್ದರೆ ಲೋಕಾಯುಕ್ತ ನಡೆಸುವ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ದೂರುಗಳನ್ನು ಸಲ್ಲಿಸಬಹುದು.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ. ಲೋಕಾಯುಕ್ತ ಡಿಎಸ್‌ಪಿ ಮಧುಸೂಧನ, ಪೊಲೀಸ್ ನಿರೀಕ್ಷಕರಾದ ಮುಸ್ತಾಕ್ ಅಹ್ಮದ ಹಾಗೂ ಮಂಜುನಾಥ ಪಂಡಿತ ಅಹವಾಲು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.