ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಟಿ.ಎಂ.ಎ.ಇ.ಎಸ್. ಬಿ.ಇಡಿ. ಕಾಲೇಜ್ ಹಾಗೂ ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಫೆ.1ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ, ಜಿಲ್ಲೆಯ ಶಾಸಕರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜು ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಮೈದೂರ, ಇತರರು ಪಾಲ್ಗೊಳ್ಳಲಿದ್ದಾರೆ.
ನಿವೃತ್ತ ಪ್ರಾಚಾರ್ಯ ಪ್ರೊ.ಬಿ.ಎಸ್.ಯಾವಗಲ್ಲ ಉಪನ್ಯಾಸ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಪ್ರಾಚಾರ್ಯ ಡಾ.ಬಸನಗೌಡ್ರ, ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಮಡಿವಾಳರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ಅಕ್ಷಯ ಶ್ರೀಧರ, ಎಸ್‌ಪಿ ಅಂಶುಕುಮಾರ, ಚನ್ನವೀರಪ್ಪ ಬ.ಮಡಿವಾಳರ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಚಿದೇವ ಯುವ ಬ್ರಿಗೇಡ್‌ನ ಜಿಲ್ಲಾಧ್ಯಕ್ಷ ಸತೀಶ ಮಡಿವಾಳರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.