ಜಿಲ್ಲೆ

ವ್ಯಸನಮುಕ್ತ ದಿನಾಚರಣೆ ಆಗಸ್ಟ್ 1ರಂದು

ಹಾವೇರಿ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಗಸ್ಟ್ 1ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಇತರರು ಪಾಲ್ಗೊಳ್ಳುವರು. ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಮದ್ಯಪಾನದ ದುಷ್ಪರಿಣಾಮಗಳ ಕುರಿತು ಹಾಗೂ ಹಾವೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಮೋದ ನಲವಾಗಲ ಅವರು ಡಾ.ಮಹಾಂತ ಶಿವಯೋಗಿಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.