ಹಾವೇರಿ: ನಗರದಲ್ಲಿ ಶುಕ್ರವಾರ ಮಾಹೇಶ್ವರ ಕೋ.ಅಪ್ ಕ್ರೆಡಿಟ್ ಸೊಸೈಟಿಯ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಾಳೆಹೊನ್ನೂರ ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರ್ಜಗಿ ಗೌರಿಮಠ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಹಾವೇರಿ ಹರಸೂರ ಬಣ್ಣದಮಠ ಶ್ರೀ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಎಸ್.ಎನ್.ಹಿರೇಮಠ, ಎಸ್.ಸಿ.ಮಳಿಮಠ, ಎಸ್.ಜಿ.ಪಾಟೀಲ, ಸೌಭಾಗ್ಯ ಹಿರೇಮಠ, ಇತರರಿದ್ದರು.