ಜಿಲ್ಲೆ

ಶ್ರೀ ಮಾಹೇಶ್ವರ ಪತ್ತಿನ ಸಹಕಾರಿ ಸಂಘದ ಮಹಾಸಭೆ 23ರಂದು

ಹಾವೇರಿ: ನಗರದ ಅಕ್ಕಿಪೇಟೆಯ ಶ್ರೀ ಮಾಹೇಶ್ವರ ಕ್ರೆಡಿಟ್ ಕೋ-ಆಪ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಸೆ.23ರಂದು ಜರುಗಲಿದೆ.
ಮಧ್ಯಾಹ್ನ 2 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ಮದ್ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದಂಗಳವರ ಸಾನ್ನಿಧ್ಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಗೌರಿಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಹರಸೂರ ಬಣ್ಣದ ಮಠದ ಶ್ರೀ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸೊಸೈಟಿ ಕಾರ್ಯದರ್ಶಿ ಸಿ.ಎಸ್.ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.