ಜಿಲ್ಲೆ

ಜಾಗೃತಿ ಕಾರ್ಯಾಗಾರ 21ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ಎಲ್ಲ ಲೇವಾದೇವಿಗಾರರು, ಗಿರವಿದಾರರು, ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಪೈನಾನ್ಸ್ ಸಂಸ್ಥೆಗಳಿಗೆ ಆಧ್ಯಾದೇಶದ ಬಗ್ಗೆ ಕಾನೂನು ಜಾಗೃತಿ ಅರಿವು ಮೂಡಿಸಲು ಕಾರ್ಯಾಗಾರವನ್ನು ಫೆ.21ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಹಕಾರಿ ಸಂಘಗಳ ಉಪ ನಿಬಂಧಕರು ಹಾಗೂ ಲೇವಾದೇವಿಗಾರರ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.