ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯಕ್ಕೆ ಸೇರಿರಬೇಕು. ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ, ಸರ್ಕಾರಿ ಹಾಗೂ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ಅಂಗವಿಲರಿಗೆ ಶೇ.3ರಷ್ಟು, ಹಿಂದುಳಿದ ವರ್ಗ, ಪ.ಜಾ. ಮತ್ತು ಪ್ರ ವರ್ಗದವರಿಗೆ ಶೇ.25ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಕರ್ಜಗಿ, ಭೂವೀರಾಪುರ, ಸುಣಕಲ್ಲಬಿದರಿ, ಬ್ಯಾಡಗಿ ಹಾಗೂ ಬ್ಯಾತನಾಳ ಅಲ್ಪಸಂಖ್ಯಾತರ ಮುರಾರ್ಜಿ ದೇಸಾತಿ ವಸತಿ ಕಾಲೇಜು ಹಾಗೂ ಅಕ್ಕೂರ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನಲ್ಲಿ ಅರ್ಜಿ ನಮೂನೆ ಪಡೆಯಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮೇ 27ರೊಳಗಾಗಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.