ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.
ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜಿನಾಮೆ ಸಲ್ಲಿಸಿದರು. ಈ ಮೊದಲು ಜೂ.17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದರು. ಆದರೆ, ಅದಕ್ಕೂ ಎರಡು ದಿನ ಮೊದಲೇ ರಾಜೀನಾಮೆ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ.ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ, ಮಾರುತಿ ಮೂಳೆ, ಬೋಜೆಗೌಡ, ಇತರರು ಹಾಜರಿದ್ದರು.