ಜಿಲ್ಲೆ

ಸಾಮೂಹಿಕ ಶ್ರಮದಾನ ಅ.1ರಂದು

ಹಾವೇರಿ: ಗಾಂಧಿ ಜಯಂತಿ ಅಂಗವಾಗಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅ.1ರಂದು ಬೆಳಗ್ಗೆ 6 ಗಂಟೆಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ನಡೆಯಲಿದೆ.
ವಾರ್ಡ್ ನಂ.1ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಜಿ.ಪಂ.ಉಪ ಕಾರ್ಯದರ್ಶಿ ರಂಗಸ್ವಾಮಿ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ವಿಭಾಗದ ಅಧಿಕಾರಿ, ಸಿಬ್ಬಂದಿ, ವಾರ್ಡ್ ನಂ.2ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಲೋಕೋಪಯೋಗಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸುವರು. ಹೀಗೆ ಎಲ್ಲ ವಾರ್ಡುಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.