ಜಿಲ್ಲೆ

ಪಿಎಂ ಸುರಕ್ಷಾ ಭಿಮಾ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್‌ನಲ್ಲಿ ಮಾರ್ಚ್, 31, 2022ರ ಒಳಗಾಗಿ ನೋಂದಣಿಯಾದ ಅಸಂಘಟಿತ ಕಾರ್ಮಿಕರು ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡು ಮರಣ ಅಥವಾ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆಯಡಿ ಎರಡು ಲಕ್ಷ ರೂ. ಅಪಘಾತ ಪರಿಹಾರ ಸೌಲಭ್ಯಕ್ಕೆ ಅರ್ಹ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿ ಮರಣ ಹೊಂದಿದ್ದಲ್ಲಿ, ಇ-ಶ್ರಮ ಕಾರ್ಡ್, ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷೆಯ ವರದಿ, ಎಫ್.ಐ.ಆರ್ ಪ್ರತಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಅಗತ್ಯ ದಾಖಲೆಗಳು ಹಾಗೂ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ, ಅಂಗವೈಕಲ್ಯ ಪ್ರಮಾಣ ಪತ್ರ, ಇ-ಶ್ರಮ ಕಾರ್ಡ್, ಆಧಾರ್ ಕಾರ್ಡ್, ರೇಷನ್‌ಕಾರ್ಡ್ ಮತ್ತು ಅಗತ್ಯ ದಾಖಲೆಗಳೊಂದಿಗೆ ಹಾವೇರಿ ಕಾರ್ಮಿಕ ಅಧಿಕಾರಿ ಕಚೇರಿಗೆ ಅಥವಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹಾವೇರಿ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ಎಲ್ಲ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.