ಜಿಲ್ಲೆ

ಪೊಲೀಸ್ ಜಾಗೃತಿ ಜಾಥಾ ಜ.6ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾ ಪೊಲೀಸ್ ವತಿಯಿಂದ ಜ.6ರಂದು ಬೆಳಗ್ಗೆ 7 ಗಂಟೆಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ವಾಕ್ ಮತ್ತು ರನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹುಕ್ಕೇರಿ ಮಠದಿಂದ ಪ್ರಾರಂಭವಾಗಿ ಎಂಜಿ ರಸ್ತೆ ಎಸ್‌ಪಿ ಕಚೇರಿ, ಜೆ.ಎಚ್.ಪಟೇಲ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತದ ಮಾರ್ಗವಾಗಿ ಪ್ರವಾಸಿ ಮಂದಿರ ತಲುಪಲಿದೆ ಎಂದು ಎಸ್‌ಪಿ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.