ಹಾವೇರಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ಶಿಗ್ಗಾಂವಿ ತಾಲೂಕು ಕುನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜು.22ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಶಿಗ್ಗಾಂವಿಯ ಮೃತ್ಯುಂಜಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿಯ ಡಾ.ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಶಿಬಿರ ಉದ್ಘಾಟಿಸುವರು. ಶಿವಾನಂದ ಮ್ಯಾಗೇರಿ, ಪ್ರಕಾಶ ದಾಸನೂರ, ಜಯದೇವ ಅಗಡಿ, ಶ್ರೀಕಾಂತ ದುಂಡಿಗೌಡ್ರ, ಇತರರು ಪಾಲ್ಗೊಳ್ಳಲಿದ್ದಾರೆ.
ಶಿಬಿರದಲ್ಲಿ ಹೃದಯ ರೋಗ ತಜ್ಞರು, ನರರೋಗ ತಜ್ಞರು, ಎಲುಬು ಕೀಲು ತಜ್ಞರು, ಶಸ್ತ್ರ ಚಿಕಿತ್ಸಕರು, ನೇತ್ರ, ಚರ್ಮರೋಗ ತಜ್ಞರು, ಕಿವಿ, ಮೂಗು, ಗಂಟಲು, ದಂತ ತಜ್ಞರು ತಪಾಸಣೆ ನಡೆಸಲಿದ್ದಾರೆ. ಕುನ್ನೂರು ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದ ಸದುಪಯೋಗಪಡೆದುಕೊಳ್ಳಬೇಕು ಎಂದು ಕ್ಷಮತಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಆಯುಷ್ಮಾನ್ ನೋಂದಣಿ :
ಶಿಬಿರದಲ್ಲಿ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಕಾರ್ಡ್ ನೋಂದಣಿ ಮಾಡಿಕೊಳ್ಳಲಾಗುವುದು. ಆಸಕ್ತರು ರೇಶನ್ ಕಾರ್ಡ್, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ತರುವಂತೆ ಸೂಚಿಸಲಾಗಿದೆ.