Transparent umbrella under heavy rain against water drops splash background. Rainy weather concept. 
ಜಿಲ್ಲೆ

ಹಾವೇರಿ ಜಿಲ್ಲೆಯಾದ್ಯಂತ ಎರಡು ದಿನ ಶಾಲೆಗಳಿಗೆ ರಜೆ; ಶೀತಗಾಳಿ, ತಂಪು ವಾತಾವರಣ ಹಿನ್ನೆಲೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಹಾವೇರಿ: ಜಿಲ್ಲೆಯಾದ್ಯಂತ ಕಳೆದ ಎರಡು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ತಂಪು ವಾತಾವರಣ ಹಾಗೂ ಶೀತಗಾಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳಿಗೆ ಎರಡು ದಿನಗಳ ರಜೆಯನ್ನು ಜಿಲ್ಲಾದಿಕಾರಿ ಘೋಷಿಸಿದ್ದಾರೆ.

ಇನ್ನು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.26 ಮತ್ತು 27ರಂದು ಎರಡು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.