ಜಿಲ್ಲೆ

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಮಾರ್ಚ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಇಲೆಕ್ಟ್ರಿಕಲ್ ಮೋಟರ್ ರಿವೈಡಿಂಗ್ ಮತ್ತು ಪಂಪ್‌ಸೆಟ್ ರಿಪೇರಿ ಹಾಗೂ ಯುವತಿಯರಿಗೆ ಕಂಪ್ಯೂಟರ್ ಡಿಟಿಪಿ ತರಬೇತಿ ಆಯೋಜಿಸಿದೆ.

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 19ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು ಅಥವಾ www.rsetihaliyal.org ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.