ಜಿಲ್ಲೆ

ವಿವಿಧೆಡೆ ಆರ್‌ಟಿಒ ಮಾಸಿಕ ಶಿಬಿರ

ಹಾವೇರಿ: ವಾಹನಗಳ ಸದೃಢತೆ ಪ್ರಮಾಣ ಪತ್ರ (ಎಫ್‌ಸಿ), ನವೀಕರಣ ಹಾಗೂ ನೋಂದಣಿಗೆ ಸಂಬಂಧಿಸಿದ ಕೆಲಸಗಳಿಗೆ ಅನುಕೂಲಕ್ಕೆಂದು ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ವತಿಯಿಂದ ಮಾಸಿಕ ಶಿಬಿರ ಆಯೋಜಿಸಲು ನಿರ್ಧರಿಸಿದೆ.

ಪ್ರತಿ ತಿಂಗಳ ಮೊದಲನೆಯ ಶನಿವಾರ ಶಿಗ್ಗಾಂವಿ ಮತ್ತು ಸವಣೂರ ಎಪಿಎಂಸಿ ಪ್ರದೇಶಗಳಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಹಾನಗಲ್ಲ ತಾಲೂಕಿನ ಗೆಜ್ಜಿಹಳ್ಳಿ ಬಳಿಯ ಪರಿವೀಕ್ಷಣಾ ಮಂದಿರದಲ್ಲಿ ಶಿಬಿರ ಆಯೋಜಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕಾಟೋಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.