ಹಾವೇರಿ: ಸಾಲಬಾಧೆಯಿಂದ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಾನಗಲ್ಲ, ಬ್ಯಾಡಗಿ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.
ಹಾನಗಲ್ಲ ತಾಲೂಕಿನ ಗೊಂದಿ ಗ್ರಾಮದ ಚಂದ್ರಪ್ಪ ಗದಿಗೆಪ್ಪ ಬೆಳಗಾಲದ (48) ಹಾಗೂ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಸಿದ್ದಲಿಂಗಪ್ಪ ಹನುಮಂತಪ್ಪ ಸಪ್ಪಣ್ಣನವರ (28) ಮೃತ ರೈತರು.
ಚಂದ್ರಪ್ಪ ಬ್ಯಾಂಕ್‌ನಲ್ಲಿ 1.20 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಲಿಂಗಪ್ಪ 2 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಅತಿವೃಷ್ಟಿಯಿಂದ ಬೆಳೆ ಹಾಳಾದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.