ಹಾವೇರಿ: ತಾಲೂಕಿನ ಸಂಗೂರ ಸಕ್ಕರೆ ಕಾರ್ಖಾನೆಯ ಜಿಎಂ ಶುಗರ್ ಫ್ಯಾಕ್ಟರಿ ಪ್ರಸಕ್ತ ವರ್ಷದ 80 ಲಕ್ಷ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾವೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವರ್ಷ ಅಂದಾಜು 15,00 ರೈತರಿಂದ ಪಡೆದ 3.06 ಲಕ್ಷ ಟನ್ ಕಬ್ಬು ಅರೆಯಲಾಗಿದೆ. 3,050 ರೂ. ಪ್ರತಿ ಟನ್‌ಗೆ ದರ ನಿಗದಿ ಮಾಡಲಾಗಿದೆ. ಇದರಲ್ಲಿ 3.024 ರೂ. ಮಾತ್ರ ರೈತರಿಗೆ ಬಂದಿದೆ. ಬಾಕಿ 26 ರೂ. ಬರಬೇಕಿದೆ. ಒಟ್ಟಾರೆ 80 ಲಕ್ಷ ರೂ. ಈ ವರ್ಷದ ಬಾಕಿ ಇದೆ. ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಹಣ ಬಿಡುಗಡೆ ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದರು.
ಸಂಘದ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ, ಶಿವಬಸಪ್ಪ ಗೋವಿ, ಸುರೇಶ ಚಲವಾದಿ, ನಾಗರಾಜ ಎಂ., ಇತರರಿದ್ದರು.