ಜಿಲ್ಲೆ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ನಾಳೆ; ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಾರ್ಯಾಲಯದ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ.

ಹರಸೂರ ಬಣ್ಣದಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಕಾರ್ಯನಿರ್ವಾಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕ.ರಾ.ಸ.ನೌ.ಸಂ. ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಇತರರು ಭಾಗವಹಿಸುವರು.