ಜಿಲ್ಲೆ

ಪ.ಜಾ, ಪ.ಪಂ. ಸಮುದಾಯಗಳ ಕುಂದು, ಕೊರತೆ ನಿವಾರಣೆ ಸಭೆ 21ರಂದು

ಹಾವೇರಿ: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಕುಂದು-ಕೊರತೆ ನಿವಾರಣಾ ಸಭೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಮಟ್ಟದ ಎಲ್ಲ ಇಲಾಖೆ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಮಾ.21ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಭವನದಲ್ಲಿ ಜರುಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ತಿಳಿಸಿದೆ.