ಜಿಲ್ಲೆ

24ರಂದು ಆರೋಗ್ಯ ಮೇಳ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯ ಎಲ್ಲ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೆ.24ರಂದು ಆರೋಗ್ಯ ಮೇಳ ಆಯೋಜಿಸಲಾಗಿದೆ.
ಇನ್ನು ಮುಂದೆ ಪ್ರತಿ ಮಂಗಳವಾರ ಆರೋಗ್ಯ ಮೇಳ ನಡೆಯಲಿದೆ. ಮೇಳದಲ್ಲಿ ನೋಂದಣಿ, ಎಲ್ಲ ಆಸ್ಪತ್ರೆಗಳಲ್ಲಿ ಸ್ವಚ್ಛತಾ ಅಭಿಯಾನ, ರಕ್ತದಾನ ಅಭಿಯಾನ ಹಾಗೂ ಅಂಗಾಂಗ ದಾನ ಕುರಿತು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.