ಹಾವೇರಿ: ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಲುವಾಗಿ ಹಾಗೂ ತಮ್ಮ ಪ್ರಜಾಸತ್ತಾತ್ಮಕ ಹಕ್ಕಿಗಾಗಿ ವಿದ್ಯಾರ್ಥಿ ಚಳುವಳಿ ಎಸ್‌ಎಫ್‌ಐ ಸೇರಬೇಕು ಎಂದು ಜಿಲ್ಲಾ ವಕೀಲರ ಸಂಘದ ಸಹ ಕಾರ್ಯದರ್ಶಿ ನಾರಾಯಣ ಕಾಳೆ ಹೇಳಿದರು.
ನಗರದ ಸ್ವಾಮಿ ವಿವೇಕಾನಂದ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿ ಆಯೋಜಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪತ್ರಕರ್ತ, ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ಆರೇರ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಉಳಿಯಲು, ವಿದ್ಯಾರ್ಥಿಗಳಿಗೆ ಹಾಸ್ಟೆಲ್, ಬಸ್ಸಿನ ಸಮಸ್ಯೆಗಳು, ಕಾಲಕಾಲಕ್ಕೆ ವಿದ್ಯಾರ್ಥಿ ವೇತನ ಬಿಡುಗಡೆ ಆಗಲು ವಿದ್ಯಾರ್ಥಿ ಸಂಘಟನೆಗಳು ಕಾರಣ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರವಿಕುಮಾರ ಪೂಜಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್., ಉಪನ್ಯಾಸಕ ಪ್ರಭು ಬಣಕಾರ, ಸುಲೇಮಾನ ಮತ್ತಿಹಳ್ಳಿ, ಜಗದೀಶ ಎರೇಸೀಮಿ, ಸುನೀಲ ಲಮಾಣಿ, ಬ್ರಹ್ಮೇಂದ್ರಾ ಬಡಿಗೇರ, ಶಿವಾನಂದ ಸುಣಗಾರ, ಅಕ್ಕಮ್ಮ ತಳವಾರ, ಅನುಷಾ ಲಮಾಣಿ, ಸೌಜನ್ಯ ಭಜಂತ್ರಿ, ಭಾವನಾ ಪಿ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.