ಜಿಲ್ಲೆ

ಶಾಸ್ತ್ರೀ ಮಾರುಕಟ್ಟೆ ಉದ್ಘಾಟನೆ ನ.1ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ನಗರಸಭೆ ವತಿಯಿಂದ ಮುಖ್ಯಮಂತ್ರಿಯವರ ವಿಶೇಷ ಅನುದಾನದಡಿ ನಗರದಲ್ಲಿ ನಿರ್ಮಾಣ ಮಾಡಿರುವ ಲಾಲ್‌ಬಹದ್ದೂರ ಶಾಸ್ತ್ರೀ ಮಾರುಕಟ್ಟೆಯನ್ನು ನ.1ರಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಂಸದರು, ಜಿಲ್ಲೆಯ ಶಾಸಕರು, ನಗರಸಭೆ ಸದಸ್ಯರು ಪಾಲ್ಗೊಳ್ಳಲಿದ್ದಾರೆ.