ಹಾವೇರಿ: ಶಾರ್ಟ್ ಸರ್ಕ್ಯೂಟ್‌ನಿಂದ ರೆಫ್ರಿಜರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಮನೆಯ ಇತರ ವಸ್ತುಗಳಿಗೆ ವ್ಯಾಪಿಸಿದ ಪರಿಣಾಮ ಮನೆಯಲ್ಲಿನ ವಸ್ತುಗಳು ಸುಟ್ಟ ಘಟನೆ ಇಲ್ಲಿನ ಮಂಜುನಾಥ ನಗರ ಮೂರನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ.
ಚನ್ನಬಸಪ್ಪ ಗೂಳಪ್ಪನವರ ಎಂಬುವರ ಮನೆಯಲ್ಲಿದ್ದ ರೆಫ್ರಿಜರೇಟರ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹೆಚ್ಚಾಗಿ ಇತರ ವಸ್ತುಗಳಿಗೆ ವ್ಯಾಪಿಸಿಕೊಂಡಿತ್ತು. ಮನೆಯವರು ಮನೆಯಿಂದ ಹೊರಬಂದು ಕೂಡಲೇ ಅಗ್ನಿಶಾಶಮಕ ಠಾಣೆಗೆ ಮಾಹಿತಿ ನೀಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಂದಾಜು 1.20 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು ಅಗ್ನಿಶಾಮಕ ಅಧಿಕಾರಿ ವಿನಾಯಕ ಹಟ್ಟೇಕರ ತಿಳಿಸಿದ್ದಾರೆ.