ಜಿಲ್ಲೆ

ಮಾದಕ ವಸ್ತುಗಳ ಸೇವನೆ ತಡೆಗಟ್ಟುವಿಕೆ ದಿನಾಚರಣೆ; ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಾಗೃತಿ ಜಾಥಾ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಮಾದಕ ವಸ್ತುಗಳ ಸೇವನೆ ತಡೆಗಟ್ಟುವಿಕೆ ದಿನಾಚರಣೆ ಅಂಗವಾಗಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಾವೇರಿ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಎಸ್‌ಪಿ ಅಂಶುಕುಮಾರ ಚಾಲನೆ ನೀಡಿದರು. ಎಎಸ್‌ಪಿ ಎಲ್.ವೈ. ಶಿರಕೋಳ, ಸಹಾಯಕ ಆಡಳಿತಾಧಿಕಾರಿ ಪರಮೇಶ್ವರ ಬಾಳಿಕಾಯಿ, ಇನ್‌ಸ್ಪೆಕ್ಟರ್ ಸಿದ್ದಾರೂಢ ಬಡಿಗೇರ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.