ಜಿಲ್ಲೆ

ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ 26ರಿಂದ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಮೇ 26ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಆರಂಭವಾಗಲಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಉತ್ತೀರ್ಣರಾದ ವಿದ್ಯಾರ್ಥಿಗಳು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಎಸ್.ಎಸ್.ಎಲ್.ಸಿ ಪರೀಕ್ಷೆ-2ಗೆ ನೋಂದಾಯಿಸಿಕೊಳ್ಳಲು ಶುಲ್ಕ ಪಾವತಿ ವಿನಾಯಿತಿ ಇದೆ. ಹಾಗಾಗಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳಬೇಕು.

ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸ್ವಯಂಪ್ರೇರಿತರಾಗಿ ಮೇ 10ರೊಳಗಾಗಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಸಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.