ಜಿಲ್ಲೆ

ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಸುಗಮ; 21,859 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ: ಜಿಲ್ಲೆಯ 80 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್.ಎಸ್.ಎಲ್.ಸಿ. ವಿಜ್ಞಾನ ವಿಷಯದ ಪರೀಕ್ಷೆ ಸುಗಮವಾಗಿ ಜರುಗಿತು.

ವಿಜ್ಞಾನ ಪರೀಕ್ಷೆಗೆ ನೋಂದಾಯಿಸಿಕೊಂಡ 22,200 ವಿದ್ಯಾರ್ಥಿಗಳ ಪೈಕಿ 21,859 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, 341 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.