ಜಿಲ್ಲೆ

ಉಪ ನೋಂದಣಿ ಕಚೇರಿ ಅವಧಿ ವಿಸ್ತರಣೆ; 23ರಿಂದ 30ರವರೆಗೆ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ನಿರ್ವಹಣೆ

ಹಾವೇರಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತದೆ. ಹಾಗಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23ರಿಂದ ಜಾರಿಗೆ ಬರುವಂತೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ.
ನಾಲ್ಕನೇ ಶನಿವಾರ (ಸೆ.23) ಕೂಡ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.