ಜಿಲ್ಲೆ

ರಜಾ ದಿನಗಳಲ್ಲಿ ಉಪ ನೋಂದಣಿ ಕಚೇರಿ ಕಾರ್ಯನಿರ್ವಹಣೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ಎಲ್ಲ ಉಪನೋಂದಣಿ ಕಚೇರಿಗಳು ಬರುವ 1 ಜೂನ್ 2025ರಿಂದ 28 ಡಿಸೆಂಬರ್ 2025ರವರೆಗೆ 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರಗಳ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಲಿವೆ.

ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಉಪ ನೋಂದಣಾಧಿಕಾರಿಗಳ ಕಚೇರಿಗೆ ತಕ್ಷಣ ಬರುವ ಮುಂದಿನ ಮಂಗಳವಾರ ದಿನವನ್ನು ರಜಾ ದಿನವನ್ನಾಗಿ ಘೋಷಿಸಿದೆ. ಹಾವೇರಿ ಜಿಲ್ಲಾ ನೋಂದಣಿ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳ ನೋಟೀಸ್ ಬೋರ್ಡ್‌ನಲ್ಲಿ ಕಚೇರಿ ಕರ್ತವ್ಯ ನಿರ್ವಹಿಸುವ ದಿನಾಂಕಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.