ಜಿಲ್ಲೆ

ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ದಾಂಡೇಲಿಯ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿಯಲ್ಲಿ 10 ದಿನಗಳ ಉಚಿತ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಹೆಸರು, ವಿಳಾಸ, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ವಿವರಗಳ ಅರ್ಜಿಯನ್ನು ಜು.31ರೊಳಗಾಗಿ ಕೆನರಾ ಬ್ಯಾಂಕ್, ದೇಶಪಾಂಡೆ ಅರಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಸಲ್ಲಿಸಬೇಕು.