ಜಿಲ್ಲೆ

ಹಾವೇರಿ ವಿವಿ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಏ.12ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಇಲ್ಲಿನ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಏ.12ರಂದು ಬೆಳಗ್ಗೆ 11 ಗಂಟೆಗೆ ವಿವಿ ಸಭಾಭವನದಲ್ಲಿ ಜರುಗಲಿದೆ.

ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟನೆ ನೆರವೇರಿಸಲಿದ್ದು, ಹಾವೇರಿ ವಿವಿ ಕುಲಪತಿ ಪ್ರೊ.ಸುರೇಶ ಎಚ್. ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ, ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ದಳವಾಯಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ನಾವೀನ್ಯತೆ ಸಲಹೆಗಾರ ರಾಜಶೇಖರ ಹಿರೇಮಠ ಹಾಗೂ ಅಂತಾರಾಷ್ಟ್ರೀಯ ಶೈಕ್ಷಣಿಕ ಸಲಹೆಗಾರ ಡಾ.ಶಿವಾನಂದ ಉತ್ಲಾಸರ ಭಾಗವಹಿಸಲಿದ್ದಾರೆ.