ಜಿಲ್ಲೆ

ವಿವಿ ಮುಚ್ಚಿದರೆ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಂಚನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಹಿತಿ ಕಲಾವಿದರ ಬಳಗ, ಭಾರತ ಜ್ಞಾನ ವಿಜ್ಞಾನ ಸಮಿತಿ, ಎಸ್‌ಎಫ್‌ಐ ಮತ್ತು ಡಿವೈಎಫ್‌ವೈ ವತಿಯಿಂದ ಹಾವೇರಿ ವಿಶ್ವವಿದ್ಯಾಲಯ ಮುಚ್ಚದಂತೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಒಂದು ವೇಳೆ ವಿಶ್ವ ವಿದ್ಯಾಲಯವನ್ನು ಮುಚ್ಚಿದರೆ ಗ್ರಾಮೀಣ ಭಾಗದ ಬಡ ಮಕ್ಕಳು, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ. ವಿವಿ ಮುಚ್ಚದೇ ಅದರ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಒತ್ತಾಯಿಸಿದರು.

ಹಿರಿಯ ಲೇಖಕ ಸತೀಶ ಕುಲಕರ್ಣಿ, ಇಡಾರಿ ಸಂಸ್ಥೆಯ ಅಧ್ಯಕ್ಷೆ ಪರಿಮಳಾ ಜೈನ್, ಭಾರತ ಜ್ಞಾನ ವಿಜ್ಞಾನ ಸಮಿತಿಯ ರೇಣುಕಾ ಗುಡಿಮನಿ, ಲೇಖಕಿಯರಾದ ಅನಿತಾ ಮಂಜುನಾಥ, ಜುಬೇದಾ ನಾಯಕ್, ನೇತ್ರಾ ಅಂಗಡಿ, ಇತರರಿದ್ದರು.