ಜಿಲ್ಲೆ

ಹಾವೇರಿ ವಿವಿಯಲ್ಲಿ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಂಡು ನೂತನವಾಗಿ ಸ್ಥಾಪಿತಗೊಂಡಿರುವ ಹಾವೇರಿ ವಿಶ್ವವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿಗಾಗಿ ಹಾವೇರಿ ವಿಶ್ವವಿದ್ಯಾಲಯದ ಕೆರಿಮತ್ತಿಹಳ್ಳಿಯ ಮುಖ್ಯ ಆವರಣ ಹಾಗೂ ಸಂಯೋಜಿತ ಸ್ನಾತಕೋತ್ತರ ಮಹಾವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಿಗೆ (ಎಂ.ಎ., ಎಂ.ಎಸ್.ಡಬ್ಲ್ಯೂ ಮತ್ತು ಎಂ.ಕಾಂ) ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದೆ.
ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಯು.ಯು.ಸಿ.ಎಂ.ಎಸ್ ಜಾಲತಾಣದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ವಿವರವಾದ ಅಧಿಸೂಚನೆಯನ್ನು ಹಾವೇರಿ ವಿಶ್ವವಿದ್ಯಾಲಯದ ವೆಬ್‌ಸೈಟ್(ಡಿಡಿಡಿ.ಛ್ಟಿಜ್ಠ್ಞಿಜಿಛ್ಟಿಜಿಠಿ.ಚ್ಚ.ಜ್ಞಿ)ನಲ್ಲಿ ಪಡೆಯಬಹುದಾಗಿದೆ ಎಂದು ಹಾವೇರಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.