ಜಿಲ್ಲೆ

ಸರ್ಕಾರದ ಸಾಧನೆ ಬಿಂಬಿಸುವ ವಸ್ತುಪ್ರದರ್ಶನ

ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.6ರಿಂದ 8ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸರ್ಕಾರದ ಯೋಜನೆಗಳು ಹಾಗೂ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಸಾರ್ವಜನಿಕ ವೀಕ್ಷಣೆಗೆ ಅವಕಾಶವಿದೆ.

ಜು.7ರಂದು ಬೆಳಗ್ಗೆ 10.30ಕ್ಕೆ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆ ಜರುಗಲಿದೆ. ಸ್ಥಳೀಯ ಜನಪ್ರತಿನಿಧಿಗಳು. ಜಿಲ್ಲಾಧಿಕಾರಿಯವರು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇತರರು ಭಾಗವಹಿಸಲಿದ್ದಾರೆ.