ಜಿಲ್ಲೆ

ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ 18ರಿಂದ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಎಂಜಿ ರಸ್ತೆ ಸಮೀಪದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರ ದೇವರ ಜಾತ್ರಾ ಮಹೋತ್ಸವ ಅ.18ರಿಂದ 20ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಅ.18ರಂದು ಬೆಳಗ್ಗೆ 9.30ರಿಂದ ಕಂಕಣ ಧಾರಣ, ಅ.19ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ವೀರಭದ್ರ ದೇವರ ಹೂವಿನ ತೇರು ಹೊರಡಲಿದೆ. ಅ.20ರಂದು ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಗುಗ್ಗಳ ಆರಂಭವಾಗಿ, ವೀರಭದ್ರೇಶ್ವರ ದೇಗುಲ ತಲುಪಲಿದೆ. ನಂತರ ಅಗ್ನಿಕುಂಡ ಹಾಯುವುದು, ಸಂಜೆ 6 ಗಂಟೆಗೆ ಶ್ರೀ ವೀರಭದ್ರೇಶ್ವರ ದೇವರ ಅಲಂಕೃತ ರಥೋತ್ಸವ ವಿವಿಧ ವಾದ್ಯಗಳೊಂದಿಗೆ ಜರುಗಲಿದೆ.

ಜಾತ್ರಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಪ್ರಕಟಣೆ ಮೂಲಕ ಕೋರಿದ್ದಾರೆ.