ಜಿಲ್ಲೆ

ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನ.10ರಿಂದ 14ರವರೆಗೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಎಂಜಿ ರಸ್ತೆ ಬಳಿಯ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನ.10ರಿಂದ 14ರವರೆಗೆ ವಿಜೃಂಭಣೆಯಿಂದ ಜರುಗಲಿದೆ.
ನ.10ರಂದು ಬೆಳಗ್ಗೆ 9.30ರಿಂದ ವೀರಭದ್ರ ದೇಔರಿಗೆ ಕಂಕಣ ಧಾರಣೆ, ನ.11ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ, ಸಂಜೆ ಹೂವಿನ ತೇರು ಹೊರಡಲಿದೆ. ನ.12ರಂದು ಬೆಳಗ್ಗೆ ಪುರಸಿದ್ದೇಶ್ವರ ದೇವಸ್ಥಾನದಿಂದ ಗುಗ್ಗಳ ಹೊರಟು ವೀರಭದ್ರೇಶ್ವರ ದೇಗುಲ ತಲುಪಲಿದೆ. ಸಂಜೆ 6 ಗಂಟೆಗೆ ಸಕಲ ವಾದ್ಯಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.