ಜಿಲ್ಲೆ

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ದಾಂಡೇಲಿಯ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಹಾಗೂ ಧಾರವಾಡ ಟಾಟಾ ಮೋಟಾರ್ಸ್‌ ಸಹಯೋಗದಲ್ಲಿ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. ಅಭ್ಯರ್ಥಿಗಳು 20ರಿಂದ 45 ವರ್ಷದೊಳಗಿರಬೇಕು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು, ಹೆಸರು, ವಿಳಾಸ, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ವಿವರಗಳ ಅರ್ಜಿಯನ್ನು ಜು.31ರೊಳಗಾಗಿ, ಕೆನರಾ ಬ್ಯಾಂಕ್, ದೇಶಪಾಂಡೆ ಅರಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.