ಜಿಲ್ಲೆ

ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯ; ಜಿಎಚ್ ಕಾಲೇಜ್ ಆವರಣದಲ್ಲಿ ನ್ಯಾಯಾಧೀಶರಿಂದ ಚಾಲನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಅರಣ್ಯ ಇಲಾಖೆ ಪ್ರಾದೇಶಿಕ ಮತ್ತು ಸಾಮಾಜಿಕ ವಿಭಾಗ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪದವಿಪೂರ್ವ ಶಿಕ್ಷಣ ಇಲಾಖೆ, ಕೆಎಲ್‌ಇ ಸಂಸ್ಥೆಯ ಜಿಎಚ್ ಕಾಲೇಜ್ ಸಹಯೋಗದಲ್ಲಿ ನಗರದ ಜಿಎಚ್ ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಸಮಾರಂಭವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ ಸಸಿ ನೆಟ್ಟು, ನೀರುಣಿಸುವ ಮೂಲಕ ಚಾಲನೆ ನೀಡಿದರು.
ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ, ನ್ಯಾಯಾಧೀಶರಾದ ಬಾಲಮುಕುಂದ ಮುತಾಲಿಕದೇಸಾಯಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಜಿಎಚ್ ಕಾಲೇಜ್ ಪ್ರಾಂಶುಪಾಲೆ ಡಾ.ಸಂಧ್ಯಾ ಕುಲಕರ್ಣಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೇಖ್ ಅಬ್ದುಲ್ ಸಿದ್ದಿಕಿ, ಮಂಜುನಾಥ ಕೆ.ಎಚ್., ವಲಯ ಅರಣ್ಯಾಧಿಕಾರಿಗಳಾದ ಎಂ.ಎಸ್.ನ್ಯಾಮತಿ, ಶೃತಿ ಬಿ., ರೂಪಾ ಯಡಚಿ, ಇತರರಿದ್ದರು.