ಜಿಲ್ಲೆ

ಯುವನಿಧಿ ನೋಂದಣಿ ವಿಶೇಷ ಅಭಿಯಾನ 20ರವರೆಗೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಯುವನಿಧಿ ಯೋಜನೆ ವಿಶೇಷ ನೊಂದಣಿ ಅಭಿಯಾನವನ್ನು ಜಿಲ್ಲೆಯಲ್ಲಿ ಜನವರಿ 6ರಿಂದ ಜ.20ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಕಾಲೇಜ್‌ಗಳಲ್ಲಿ ಹಾಗೂ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಯುವನಿಧಿ ಯೋಜನೆ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇಲ್ಲಿ ಮಾಹಿತಿ ಪಡೆದು ಅರ್ಹ ಅಭ್ಯರ್ಥಿಗಳು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು 2023ನೇ ವರ್ಷದ ಪರೀಕ್ಷೆಯಲ್ಲಿ ಹಾಗೂ 2024ನೇ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ದಿನಾಂಕದಿಂದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 2 ವರ್ಷದವರೆಗೆ ಮಾತ್ರ ಅವಕಾಶವಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವ-ಉದ್ಯೋಗ ಹೊಂದಿಲ್ಲದವರು, ಮತ್ತು ಉನ್ನತ ವ್ಯಾಸಂಗ ಮುಂದುವರೆಸದೆ ಇರುವವರು ಅರ್ಹರಾಗಿರುತ್ತಾರೆ.

ಮೊದಲ ಕಂತಿನ ಹಣ ಪಾವತಿಯಾದ ನಂತರ ಪ್ರತಿ ತಿಂಗಳು 25ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ.ಸಂ. 08375-249291 ಅಥವಾ ಸಹಾಯವಾಣಿ ಸಂಖ್ಯೆ 18005997154 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.