ಜಿಲ್ಲೆ

ಮಾನಸಿಕ ಆರೋಗ್ಯಕ್ಕಾಗಿ ವಾಕ್‌ಥಾನ್ ಅ.10ರಂದು

ಹಾವೇರಿ: ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ಬೆಳಗ್ಗೆ 9.30ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಾಕ್‌ಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ್ ದೇವೇಂದ್ರಪ್ಪ ಎನ್. ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೈಲಜಾ ಎಚ್.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಪ್ರವೀಣಕುಮಾರ ಎಂ.ವಿ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಹಾಗೂ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ತರರು ಭಾಗವಹಿಸಲಿದ್ದಾರೆ.