ಹಾನಗಲ್ಲಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪುರಸಭೆ ವ್ಯಾಪ್ತಿಯ ವಸತಿ ರಹಿತ housing homelessಫಲಾನುಭವಿಗಳಿಗೆ ಶಾಸಕ ಶ್ರೀನಿವಾಸ ಮಾನೆ ನಿವೇಶನ ಹಕ್ಕುಪತ್ರ ವಿತರಿಸಿದರು.
ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ ಮಾತನಾಡಿ, ಪುರಸಭೆ ವ್ಯಾಪ್ತಿಯ ನಿವಾಸಿಗಳ ನೆಮ್ಮದಿಯ ಬದುಕಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಲ್ಲಿ ಕಾಳಜಿ ವಹಿಸಲಾಗಿದೆ. ಕೆಲ ತಾಂತ್ರಿಕ ಕಾರಣಗಳಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಚಾಲನೆ ಪಡೆದಿಲ್ಲ. ಶೀಘ್ರ ಚಾಲನೆ ಪಡೆಯಲಿವೆ ಎಂದರು.
ಪುರಸಭೆ ಉಪಾಧ್ಯಕ್ಷೆ ವೀಣಾ ಗುಡಿ, ತಹಸೀಲ್ದಾರ್ ಎಸ್. ರೇಣುಕಾ, ಮಾಜಿ ಅಧ್ಯಕ್ಷರಾದ ಖುರ್ಷಿದ್ ಹುಲ್ಲತ್ತಿ, ನಾಗಪ್ಪ ಸವದತ್ತಿ, ಅಹ್ಮದ್ಬಾಷಾ ಪೀರಜಾದೆ, ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಮುಖ್ಯಾಧಿಕಾರಿ ವೈ.ಕೆ. ಜಗದೀಶ ಇತರರು ಇದ್ದರು.