suicide 
ಹಾವೇರಿ

ವಿಪರೀತ ಮದ್ಯ ಸೇವಿಸಿದ ವ್ಯಕ್ತಿ ಆತ್ಮಹತ್ಯೆ

ಕರಿಯಪ್ಪ ಅರಳಿಕಟ್ಟಿ

ಸವಣೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಹೊಟ್ಟೆನೋವಿನಿಂದ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲಕೋಟಿ ಗ್ರಾಮದಲ್ಲಿ ನಡೆದಿದೆ.

ಆನಂದ ಗಂಗಪ್ಪ ತಳವಾರ (32) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬಂದ ಹೊಟ್ಟೆನೋವು ತಾಳಲಾರದೆ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.