Crime 
ಹಾವೇರಿ

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

ಶಿಗ್ಗಾಂವ: ಬೈಕ್ ಸ್ಕಿಡ್ ಆಗಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮಾದಾಪುರ ರಸ್ತೆಯಲ್ಲಿ ನಡೆದಿದೆ.

ಹುಲಗೂರ ಗ್ರಾಮದ ಶಶಾಂಕ ಈರಣ್ಣ ದೇಸಾಯಿ (20) ಮೃತ ಯುವಕ.

ಈತ ಹುಲಗೂರ ಕಡೆಯಿಂದ ಮಾದಾಪುರ ಕಡೆಗೆ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.