ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹಾನಗಲ್ಲನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿದರು. ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಮಹ್ಮದ್‌ಮತೀನ್ ಶಿರಬಡಗಿ, ಮಮತಾ ಆರೇಗೊಪ್ಪ, ವೀರೇಶ ಬೈಲವಾಳ ಇತರರಿದ್ದರು. 
ಹಾವೇರಿ

ಬೈ ಎಲೆಕ್ಷನ್ ಗೆಲುವಿಗೆ ಕೈ ಕಾರ್ಯಕರ್ತರ ಸಂಭ್ರಮ

ಹಾನಗಲ್ಲ: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಇಲ್ಲಿನ ಬಸ್ ನಿಲ್ದಾಣದ ಬಳಿಯ ಮಹಾತ್ಮಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿ ಖುಷಿ ಪಟ್ಟರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ ಮಾತನಾಡಿ, ಕರ್ನಾಟಕದ ಮತದಾರರು ಜನಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿದರೂ ಮತದಾರರು ಮಾತ್ರ ಜಾಣ ನಿರ್ಧಾರ ಕೈಗೊಂಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಮತದಾರರು ಜೈ ಎಂದಿದ್ದಾರೆ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.