ಹಿರೇಕೆರೂರ: ಸಾಲಕ್ಕೆ ಹೆದರಿ ತೆಂಗಿನಕಾಯಿ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕೋಣತಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೋಟ್ರೇಶ ಸೋಮಪ್ಪ ಸಣ್ಣಕಾರಗಿ (25) ಮೃತ ವ್ಯಕ್ತಿ.
ಇವರು ತೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದರು. ವೈಯಕ್ತಿಕ ವಿಚಾರಕ್ಕೆ 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲಾಗದೆ ಗ್ರಾಮದ ಗೋದಾಮಿನಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.